ADVERTISEMENT

‘ಪ್ರತ್ಯೇಕ ಧ್ವಜ ಕೇಳುತ್ತಿಲ್ಲ, ಸರ್ಕಾರದ ನಿಲುವು ಕನ್ನಡ ವಿರೋಧಿ‘– ಸಿದ್ದರಾಮಯ್ಯ

ನಾಡಧ್ವಜ ಚರ್ಚೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2019, 6:51 IST
Last Updated 30 ಆಗಸ್ಟ್ 2019, 6:51 IST
   

ಬೆಂಗಳೂರು:ನಾಡ ಧ್ವಜ ಹೊಂದುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ‘ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು‘ ಎಂದಿದ್ದಾರೆ.

‘ದೇಶಕ್ಕೊಂದೇ ಧ್ವಜ ಅದು ತ್ರಿವರ್ಣ ಧ್ವಜ. ಕನ್ನಡದ ಧ್ವಜವು ನಾಡಿನ ಸಾಂಸ್ಕೃತಿಕ ಧ್ವಜ. ಆದ್ದರಿಂದ ರಾಷ್ಟ್ರ ಧ್ವಜಕ್ಕೆ ಪರ್ಯಾಯ ಧ್ವಜ ಹೊಂದಲು ಸಾಧ್ಯವಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದರು. ಇದಕ್ಕೆ ಸಿದ್ದರಾಮಯ್ಯ ಶುಕ್ರವಾರ ಟ್ವೀಟ್‌ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮೂಲಕ ನಾಡ ಧ್ವಜದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಸಿ.ಟಿ.ರವಿ ಹಾಗೂ ರಾಜ್ಯ ಬಿಜೆಪಿಯನ್ನು ಟ್ಯಾಗ್‌ ಮಾಡಿರುವ ಸಿದ್ದರಾಮಯ್ಯ ಅವರು, 'ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ.‌‌ ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.‌ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು‘ ಎಂದಿದ್ದಾರೆ.

ADVERTISEMENT

ನಾಡಗೀತೆ ಒಪ್ಪಿಕೊಂಡಿರುವ ನಾವು, ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹೊಂದಲು ಇರುವ ಸಮಸ್ಯೆ ಏನು ಎಂದು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಹೊಂದುವ ಸಂಬಂಧ ಸಿದ್ದರಾಮಯ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿರುವುದು ತಿಳಿದುಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.