
ಪ್ರಜಾವಾಣಿ ವಾರ್ತೆ
ಸಿದ್ದರಾಮಯ್ಯ ಮತ್ತು ಕೆ.ಸಿ. ವೇಣುಗೋಪಾಲ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸೋಮವಾರ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಚರ್ಚೆ ನಡೆಸಿದರು.
ವಯನಾಡಿನಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ವಿಮಾನನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಭೇಟಿಯಾದರು.
ಸಚಿವರಾದ ಡಾ.ಎಚ್.ಸಿ. ಮಹಾದೇವಪ್ಪ, ಸತೀಶ ಜಾರಕಿಹೊಳಿ, ಕೆ. ವೆಂಕಟೇಶ್, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.