ADVERTISEMENT

'ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ; ಕುಕ್ಕದೇ ಬಿಡುತ್ತಾ?'–ಸಿದ್ದರಾಮಯ್ಯ

ಕುಮಾರಸ್ವಾಮಿಗೆ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 4:25 IST
Last Updated 24 ಸೆಪ್ಟೆಂಬರ್ 2019, 4:25 IST
   

ಬೆಂಗಳೂರು: 'ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು.ಕುಕ್ಕದೇ ಬಿಡುತ್ತಾ?' ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಕುರಿತು ಅಸಮಾಧಾನ ಪ್ರಕಟಿಸಿದ್ದಾರೆ.

‘ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಮತ್ತು ಮಂಡ್ಯಗಳಲ್ಲಿ ಜೆಡಿಎಸ್‌ ಸೋಲಿಗೆ ಹಾಗೂ ಕೋಲಾರದಲ್ಲಿ ಕಾಂಗ್ರೆಸ್‌ ಸೋಲಿಗೆ ಸಿದ್ದರಾಮಯ್ಯ ಸಾಕಿದ ಮುದ್ದಿನ ಗಿಣಿಗಳು ಕುಕ್ಕಿದ್ದೇಕಾರಣ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ನೇರ ಆರೋಪ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟ್ವೀಟ್‌ ಮೂಲಕಪ್ರತಿಕ್ರಿಯಿಸಿದ್ದಾರೆ.

’ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು. ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು.ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?‘ ಎಂದು ಟ್ವೀಟಿಸಿದ್ದಾರೆ.

ADVERTISEMENT

‘ಕಾಂಗ್ರೆಸ್‌ನವರು ಅವರ ಆತ್ಮಕ್ಕೆ ಪ್ರಶ್ನೆ ಮಾಡಿಕೊಳ್ಳಲಿ. ಅವರು ಸರಿಯಾಗಿ ಕೆಲಸ ಮಾಡಿಲ್ಲ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೆವು.ಮೈಸೂರಿನಲ್ಲಿಸೋಲಲು ಸಿದ್ದರಾಮಯ್ಯ ಸ್ವಯಂಕೃತ ಅಪರಾಧವೇ ಕಾರಣ’ ಎಂದು ಕುಮಾರಸ್ವಾಮಿ ಹೇಳಿದ್ದರು.

‘ಹೊಸಕೋಟೆಯಲ್ಲಿ ಸಿದ್ದರಾಮಯ್ಯಸ್ವಾಭಿಮಾನದ ಭಾಷಣ ಮಾಡಿದರು. ಮಂಡ್ಯದಲ್ಲಿ ಕಬ್ಬು ಬೆಳೆಗಾರರು ಸಾಯುತ್ತಿದ್ದಾರೆ. ಈಗ ಸಿದ್ದರಾಮಯ್ಯ ಅವರ ಸ್ವಾಭಿಮಾನ ಎಲ್ಲಿಗೆ ಹೋಯಿತು?ಇವರ ನಾಟಕ ಎಲ್ಲಾ ನನಗೆ ಗೊತ್ತಿದೆ.ಮಂಡ್ಯದಲ್ಲಿ ಬಿಜೆಪಿ ಜೊತೆ ಸೇರಿಕೊಂಡು ಏನೇನುಮಾಡುತ್ತಿದ್ದಾರೆ ಎಂಬುದೂ ಗೊತ್ತಿದೆ’ ಎಂದು ಆರೋಪಿಸಿದ್ದರು.

‘ಈ ಬಾರಿ ಯಾರ ಸಹವಾಸವೂ ಇಲ್ಲದೆ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ’ ಎನ್ನುವ ಮೂಲಕ ಮೈತ್ರಿಯಿಂದ ದೂರ ಉಳಿಯುವುದಾಗಿ ಕುಮಾರಸ್ವಾಮಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಓದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.