
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರಿಯಾದ ಸಮಯಕ್ಕೆ ಭೇಟಿ ಮಾಡದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ– ಆಡಳಿತ) ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್ ನೀಡಿದ್ದಾರೆ.
ಇದೇ 20ರಂದು ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಕಚೇರಿಯಿಂದ ಪಾಂಡೆ ಅವರಿಗೆ ಸೂಚಿಸಲಾಗಿತ್ತು. ಆದರೆ, ಅವರು ಸರಿಯಾದ ಸಮಯಕ್ಕೆ ಹಾಜರಾಗಿರಲಿಲ್ಲ. ಇದನ್ನು ಮುಖ್ಯಮಂತ್ರಿ ಗಂಭೀರವಾಗಿ ಪರಿಗಣಿಸಿದ್ದರು.
ಈ ವಿಚಾರವನ್ನು ನೋಟಿಸ್‌ನಲ್ಲಿ ಉಲ್ಲೇಖಿಸಿರುವ ಮಖ್ಯ ಕಾರ್ಯದರ್ಶಿ, ‘ಇದು ಗಂಭೀರ ಕರ್ತವ್ಯ ಲೋಪ ಆಗಿದ್ದು, ಶಿಸ್ತು ನಿಯಮಗಳ ಉಲ್ಲಂಘನೆಯಾಗಿದೆ. ಈ ಲೋಪಕ್ಕೆ ಸಂಬಂಧಿಸಿದಂತೆ ಲಿಖಿತ ವಿವರಣೆ ನೀಡಬೇಕು’ ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.