ADVERTISEMENT

ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2022, 14:29 IST
Last Updated 19 ಸೆಪ್ಟೆಂಬರ್ 2022, 14:29 IST
ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ
ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ   

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಭೇಟಿಯಾದರು.

ಸಿದ್ದರಾಮಯ್ಯ ಅವರ ಜೊತೆ ಕಾಂಗ್ರೆಸ್ ಮುಖಂಡರಾದ ಆರ್‌.ವಿ ದೇಶಪಾಂಡೆ, ಜಮೀರ್ ಅಹಮ್ಮದ್, ಅಶೋಕ್ ಪಟ್ಟಣ ಇದ್ದರು.

ADVERTISEMENT

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಅವರು, ದೇವೇಗೌಡರ ಆರೋಗ್ಯ ವಿಚಾರಿಸಿದ್ದೇನೆ ಎಂದು ಹೇಳಿದ್ದಾರೆ.

ಆರು ವರ್ಷಗಳ ನಂತರ ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯ ತೆರಳಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.