ADVERTISEMENT

CM ಸಿದ್ದರಾಮಯ್ಯ ವಿರುದ್ಧ ಕೊ*ಲೆ ಆರೋಪ–ವಾಗ್ವಾದ: ಹಕ್ಕುಚ್ಯುತಿ ಮಂಡನೆಗೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 10:08 IST
Last Updated 18 ಆಗಸ್ಟ್ 2025, 10:08 IST

ಮುಖ್ಯಮಂತ್ರಿ ಸಿದ್ದರಾಮಯ್ಯ 24 ಕೊ*ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಧಾನಸಭೆಯಲ್ಲಿ ಬಿರುಸಿನ ಚರ್ಚೆ ನಡೆಯಿತು. ವಿರೋಧಪಕ್ಷದ ನಾಯಕ ಆರ್. ಅಶೋಕ ಅವರು, ‘ವಿಧಾನಸಭೆಯ ಸಭಾನಾಯಕರಾದ ಮುಖ್ಯಮಂತ್ರಿ ವಿರುದ್ಧವೇ ಸಾರ್ವಜನಿಕವಾಗಿ ಇಂತಹ ಆರೋಪ ಮಾಡಿದರೂ ಸರ್ಕಾರ ಏಕೆ ಕೈಕಟ್ಟಿ ಕುಳಿತಿದೆ’ ಎಂದು ಪ್ರಶ್ನಿಸಿದರು. ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ನನ್ನ ಕುರಿತು ಸುಳ್ಳು ಆರೋಪ ಮಾಡುತ್ತಿದ್ದಾರೆ, ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಅವಕಾಶ ನೀಡಬೇಕು ಎಂದು ಬಿಜೆಪಿಯ ಎಸ್.ಆರ್. ವಿಶ್ವನಾಥ ಒತ್ತಾಯಿಸಿದರು. ಹಕ್ಕುಚ್ಯುತಿ ಮಂಡನೆಗೆ ವಿಧಾನಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.