ADVERTISEMENT

ಪ್ರಧಾನಿ ಬಳಿ ನೆರೆ ಪರಿಹಾರ ಕೇಳುವ ಧೈರ್ಯ ರಾಜ್ಯ ಸರ್ಕಾರ ಮಾಡಲಿ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಆಗಸ್ಟ್ 2020, 6:34 IST
Last Updated 10 ಆಗಸ್ಟ್ 2020, 6:34 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಅತಿವೃಷ್ಟಿ ಪರಿಸ್ಥಿತಿಯನ್ನು ಪ್ರಧಾನಿ ಮೋದಿಯವರ ಮುಂದೆ ಧೈರ್ಯ ಮಾಡಿ ವಿವರಿಸಿ, ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು ಪ್ರಧಾನಿ ಮುಂದೆ ರಾಜ್ಯ ಸರ್ಕಾರ ಇಡಬೇಕಿರುವ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

'ಅತಿವೃಷ್ಟಿ ಬಗ್ಗೆ ಪ್ರಧಾನಿ ಮೋದಿ ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ‌ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT

'ಪ್ರಧಾನಿ ಮೋದ ನಡೆಸುವ ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್‌.ಅಶೋಕ್‌ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು' ಎಂದು ಅವರು ಒತ್ತಾಯಿಸಿದ್ದಾರೆ.

'ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ₹1,00,000 ಕೋಟಿ. ರಾಜ್ಯ ಸರ್ಕಾರದ ವರದಿ ಪ್ರಕಾರ ನಷ್ಟ- ₹ 50,000 ಕೋಟಿ. ಪರಿಹಾರ ಕೇಳಿದ್ದು ₹35,000 ಕೋಟಿ. ಕೇಂದ್ರ ಸರ್ಕಾರ ಕೊಟ್ಟಿದ್ದು ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿಗಳು ಮಾಡಿರುವ ಇನ್ನಿತರ ಟ್ವೀಟ್‌ಗಳು ಇಲ್ಲಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.