
ಪ್ರಜಾವಾಣಿ ವಾರ್ತೆಅರವಿಂದ ಬೆಲ್ಲದ
– ಪ್ರಜಾವಾಣಿ ಚಿತ್ರ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ನಾಯಕ ಅಲ್ಲ. ಅವರು ಕುರುಬರ ನಾಯಕರು ಅಷ್ಟೇ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, 'ಅಹಿಂದದಲ್ಲಿ ಹತ್ತಾರು ಜಾತಿಗಳಿವೆ. ಆ ಜಾತಿಯವರು ಯಾರೂ ಸಿದ್ದರಾಮಯ್ಯ ಅವರನ್ನು ನಾಯಕನೆಂದು ಒಪ್ಪಿಕೊಂಡಿಲ್ಲ. ಅವರು ಯಾವ ರೀತಿಯ ಒಬಿಸಿ ನಾಯಕ‘ ಎಂದು ಪ್ರಶ್ನಿಸಿದರು.
‘ಅಲ್ಪಸಂಖ್ಯಾತರ ಮತ ಕಾಂಗ್ರೆಸ್ ಜತೆಗೆ ಇದೆ. ಅದು ಸಿದ್ದರಾಮಯ್ಯ ಅವರ ಮತ ಬ್ಯಾಂಕ್ ಅಲ್ಲ. ಅಹಿಂದ ನಾಯಕನೆಂದು ಬಿಂಬಿಸಿಕೊಂಡು ಹೈಕಮಾಂಡ್ ಅನ್ನು ಬೆದರಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ‘ ಎಂದರು.
ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಪಕ್ಷದಲ್ಲಿ ಇನ್ನೂ ತೀರ್ಮಾನ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.