ADVERTISEMENT

ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂದೆ ಕಂಪನಿಗಳ ಲಾಭದ ಉದ್ದೇಶ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 12 ಮೇ 2020, 7:37 IST
Last Updated 12 ಮೇ 2020, 7:37 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ರೈತರನ್ನು ಶೋಷಿಸಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ನಿಟ್ಟಿನಲ್ಲಿ ತರುವ ಸುಗ್ರೀವಾಜ್ಞೆಯನ್ನು ಪಕ್ಷ ಉಗ್ರವಾಗಿ ವಿರೋಧಿಸಲಿದೆ. ವಿಧಾನ ಮಂಡಲದಲ್ಲಿ ಚರ್ಚಿಸಿದ ಮೇಲಷ್ಟೇ ಇದರ ಬಗ್ಗೆ ನಿರ್ಧಾರಕ್ಕೆ ಬರಬೇಕು ಎಂದು ಅವರು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸದೆ, ಬಿಜೆಪಿಯ ಕಾರ್ಯಕರ್ತರನ್ನು ನಾಮಕರಣ ಮಾಡುವ ಹುನ್ನಾರ ನಡೆದಿದೆ. ಇದರ ವಿರುದ್ಧ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದೂ ಅವರು ಹೇಳಿದರು.

ಚುನಾವಣೆ ನಡೆಯದಿದ್ದರೆ ಇನ್ನೂ ಆರು ತಿಂಗಳು ಹಾಲಿ ಸದಸ್ಯರನ್ನೇ ಮುಂದುವರಿಸಬಹುದು. ಆದರೆ ಅದಕ್ಕೆ ಅವಕಾಶ ಕೊಡದೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅವಕಾಶ ನೀಡುವ ಸಲುವಾಗಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.