ADVERTISEMENT

ಬಿಜೆಪಿ ನಾಯಕರ ನಾಲಗೆಗೆ ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 6:35 IST
Last Updated 26 ಫೆಬ್ರುವರಿ 2020, 6:35 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು:'ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರೇ ಪರಿಸ್ಥಿತಿ ಕೈ ಮೀರಿ ಹೋಗುವ ಮುನ್ನ ಎಚ್ಚೆತ್ತುಕೊಳ್ಳಿ. ದೆಹಲಿ ಗಲಭೆ ಕಣ್ಣ ಮುಂದಿದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ರಾಜ್ಯದ ಬಿಜೆಪಿ ನಾಯಕರ ನಾಲಗೆಗೆ ತಕ್ಷಣ ಕಡಿವಾಣ ಹಾಕಬೇಕಿದೆ. ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ' ಎಂದು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ಮುಖ್ಯಮಂತ್ರಿಗಳಾದ ಬಿಎಸ್‌ವೈ ಅವರೇ, ಹಿರಿಯ ಸ್ವಾತಂತ್ರ್ಯ‌ ಹೋರಾಟಗಾರರಾದ ಎಚ್.ಎಸ್. ದೊರೆಸ್ವಾಮಿಯವರನ್ನು ನಿಂದಿಸಿ ಅತ್ಯಂತ‌ ಕೀಳಾಗಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಂಡು ಬಾಯಿ ಮುಚ್ಚಿಸಿ. ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ' ಎಂದು ಒತ್ತಾಯಿಸಿದ್ದಾರೆ.

ADVERTISEMENT

ಸಿಎಎ ಪರ ಮತ್ತು ವಿರೋಧಿ ಬಣಗಳಿಂದ ನಡೆಯುತ್ತಿದ್ದ ಪ್ರತಿಭಟನೆಯು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಬಳಿಕ 20 ಜನರು ಮೃತಪಟ್ಟಿದ್ದು, 189 ಜನರು ಗಾಯಗೊಂಡಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ, ಸಂತ್ರಸ್ತರಿಗೆ ಪರಿಹಾರ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಹಲವಾರು ರಾಜಕೀಯ ನಾಯಕರನ್ನು ಬಂಧಿಸುವುರು ಕುರಿತಂತೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಬುಧವಾರ ದೆಹಲಿ ಪೊಲೀಸ್ ಕಮಿಷನರ್‌ಗೆನೋಟಿಸ್ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.