ADVERTISEMENT

ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್: ಆರ್. ಅಶೋಕ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಏಪ್ರಿಲ್ 2025, 5:54 IST
Last Updated 27 ಏಪ್ರಿಲ್ 2025, 5:54 IST
<div class="paragraphs"><p>ಆರ್. ಆಶೋಕ, ಸಿದ್ದರಾಮಯ್ಯ</p></div>

ಆರ್. ಆಶೋಕ, ಸಿದ್ದರಾಮಯ್ಯ

   

ಪ್ರಜಾವಾಣಿ ಚಿತ್ರ

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸು ಕ್ರಮ ಕೈಗೊಳ್ಳಬೇಕು ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಸಿದ್ದರಾಮಯ್ಯ ಅವರ ಹೇಳಿಕೆಗಳು ಪಾಕಿಸ್ತಾನದ ಸುದ್ದಿ ವಾಹಿನಿಗಳಲ್ಲಿ ಬಿತ್ತರಿಸಿದ್ದವು. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಶೋಕ ಟೀಕಾಪ್ರಹಾರ ಮಾಡಿದ್ದಾರೆ.

'ಪಾಕಿಸ್ತಾನ ರತ್ನ' ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ನಿಶಾನ್-ಎ-ಪಾಕಿಸ್ತಾನ' ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ' ಎಂದು ವ್ಯಂಗ್ಯವಾಡಿದ್ದಾರೆ.

'ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತಿದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ' ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.