ADVERTISEMENT

ಮತಯಂತ್ರದ ವಿಶ್ವಾಸಾರ್ಹತೆ–ಸಿದ್ದರಾಮಯ್ಯ ಶಂಕೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2018, 18:40 IST
Last Updated 25 ಅಕ್ಟೋಬರ್ 2018, 18:40 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೈಂದೂರು: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಂತ್ರಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ ಪ್ರಸಂಗ ಗುರುವಾರ ನಾಗೂರಿನಲ್ಲಿ ನಡೆಯಿತು.

‘ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಐದು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದ ₹2 ಸಾವಿರ ಕೋಟಿ ಅನುದಾನ ಬಳಸಿಕೊಂಡು ಕ್ಷೇತ್ರದಲ್ಲಿ ರಸ್ತೆ, ಸೇತುವೆ, ಮೀನುಗಾರಿಕಾ ಬಂದರು, ವಸತಿಯಂತಹ ಯೋಜನೆಗಳನ್ನು ಅನುಷ್ಠಾನಗೊಳಿಸಿದರು. ಆದರೆ, ಅವರು 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋತರು. ನಿಜವಾಗಿ ಜನರೇ ಹೀಗೆ ಮಾಡಿದರೇ ಅಥವಾ ಮತಯಂತ್ರದ ದೋಷದಿಂದ ಹೀಗೆ ಆಯಿತೇ ಎನ್ನುವುದು ತಿಳಿಯುತ್ತಿಲ್ಲ’ ಎಂದು ಅವರು ಹೇಳಿದರು.

‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಬಡವರು ಹಸಿದಿರಬಾರದು ಎಂಬ ಉದ್ದೇಶದಿಂದ ನಾಲ್ಕು ಕೋಟಿ ಜನರಿಗೆ ಪ್ರತಿ ತಿಂಗಳು ತಲಾ ಏಳು ಕೆ.ಜಿ. ಅಕ್ಕಿ ನೀಡಿದೆವು. ಇದು ಬಿಜೆಪಿ ಆಡಳಿತ ಇರುವ ಯಾವುದೇ ರಾಜ್ಯದಲ್ಲಿ ಆಗಿಲ್ಲ. ಅದಕ್ಕೆ ಬದಲಾಗಿ ಅವರು ಹಿಂದುತ್ವದ ಪ್ರತಿಪಾದನೆಯ ಮೂಲಕ ಜನರ ದಾರಿತಪ್ಪಿಸಿ ಮತ ಪಡೆಯುತ್ತಾರೆ. ಹಿಂದುತ್ವದ ಪ್ರತಿಪಾದನೆಯಿಂದ ಹಸಿದವರ ಹೊಟ್ಟೆ ತುಂಬದು’ ಎಂದು ಅವರು ಪ್ರತಿಪಾದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.