ADVERTISEMENT

PSI ಹಗರಣ– ಅಮ್ರಿತ್ ಪೌಲ್ ಡೈರಿಯಲ್ಲಿ ಏನಿದೆ ಎಂಬುದು ಬಹಿರಂಗವಾಗಲಿ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜುಲೈ 2022, 9:47 IST
Last Updated 14 ಜುಲೈ 2022, 9:47 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರವಾಗಿ ವಾಗ್ದಾಳಿ ಮುಂದುವರಿಸಿರುವ ಅವರು, ‘ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

‘ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ‌ಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. ಉಪ್ಪು ತಿಂದವರು ನೀರು ಕುಡಿಯಲಿ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.