ಬೆಂಗಳೂರು: ‘ಶಾಸಕ ಜಮೀರ್ ಅಹಮ್ಮದ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
‘ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ’ ಎಂದು ಅವರು ತಿಳಿಸಿದ್ದಾರೆ.
‘ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ’ ಎಂದೂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.