ADVERTISEMENT

ಸಿಂಧೂ ಬಿ.ರೂಪೇಶ್‌ ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 20:24 IST
Last Updated 29 ಜುಲೈ 2020, 20:24 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮಕ್ಕೆವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಶಹಬ್ಬಾಸ್‌ ಯಡಿಯೂರಪ್ಪನವರೇ. ಒಂದೆಡೆ ಕೊರೊನಾ ವಾರಿಯರ್ಸ್‌ಗೆ ಆಕಾಶದಿಂದ ಹೂ ಮಳೆ ಸುರಿಸುತ್ತೀರಿ. ಇನ್ನೊಂದೆಡೆ ಕೊಲೆ ಬೆದರಿಕೆ ಎದುರಿಸುತ್ತಿರುವ ಅಧಿಕಾರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡುತ್ತೀರಿ. ಇದೇನಾ ಕೊರೊನಾ ಸೇನಾನಿಗಳಿಗೆ ಕೊಡುವ ಗೌರವ’ ಎಂದು ಅವರು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

‘ಕೊರೊನಾ ಅಕ್ರಮ ಬಯಲಿಗಳೆದರೆ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡುತ್ತೀರಿ ಎಂದು ದೂರುತ್ತೀರಿ. ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದ್ದೀರಿ. ಈಗ ಕೋಮುವಾದಿಗಳ ರಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ’ ಎಂದೂ ಕೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.