ADVERTISEMENT

PFI Ban: ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಸೆಪ್ಟೆಂಬರ್ 2022, 11:26 IST
Last Updated 28 ಸೆಪ್ಟೆಂಬರ್ 2022, 11:26 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಐದು ವರ್ಷದ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎಂದು ಹೇಳಿದ್ದಾರೆ.

ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಸಂಸ್ಥೆಗಳು ಹಿಂದು, ‌ಮುಸ್ಲಿಮ್ ಯಾರದ್ದೇ ಆಗಿರಲಿ ಮುಲಾಜಿಲ್ಲದೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳುತ್ತಲೇ ಬಂದಿದ್ದನ್ನು ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ.

ಜಾತಿ, ಧರ್ಮಗಳ ಆಧಾರದ ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎನ್ನುವುದಷ್ಟೇ ನನ್ನ ಸಲಹೆ ಎಂದು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.