ADVERTISEMENT

CT ರವಿ ಅವಾಚ್ಯ ಪದ ಬಳಕೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ದೂರು ನೀಡಿದ್ದಾರೆ– ಸಿಎಂ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2024, 11:39 IST
Last Updated 19 ಡಿಸೆಂಬರ್ 2024, 11:39 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಸುವರ್ಣ ವಿಧಾನಸೌಧ(ಬೆಳಗಾವಿ): ‘ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿ.ಟಿ ರವಿ ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದು, ತಾನು ವಿಧಾನಪರಿಷತ್ತಿನಲ್ಲಿ ಇರಲಿಲ್ಲ’ ಎಂದು ತಿಳಿಸಿದರು.

‘ಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.