ADVERTISEMENT

'ಮುಂದಿನ ಮುಖ್ಯಮಂತ್ರಿ' ಹೇಳಿಕೆ ಕೊಡಬೇಡಿ: ಶಾಸಕರಲ್ಲಿ ಸಿದ್ದರಾಮಯ್ಯ ಮನವಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 10:45 IST
Last Updated 24 ಜೂನ್ 2021, 10:45 IST
ಸಿದ್ದರಾಮಯ್ಯ ಅವರ ಸಾಂದರ್ಭಿಕ ಚಿತ್ರ
ಸಿದ್ದರಾಮಯ್ಯ ಅವರ ಸಾಂದರ್ಭಿಕ ಚಿತ್ರ   

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಮನವಿ ಮಾಡಿದ್ದಾರೆ.

'ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ' ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಎಂದು ಈಗಲೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.