
ಬೆಂಗಳೂರು: ‘ಮುಖ್ಯಮಂತ್ರಿ ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದಲ್ಲ. ಆದರೆ, ಮೂವತ್ತು ತಿಂಗಳ ನಂತರವಾದರೂ ಬಿಡಬಹುದು, ಅದಕ್ಕೂ ಮೊದಲೇ ಬಿಡಬಹುದು. ಬಿಡುವುದಂತೂ ಪಕ್ಕಾ. ಯಾವಾಗಲಾದರೂ ಬಿಡಲೇಬೇಕು' ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
‘ರಾಜಕೀಯ ಶಾಶ್ವತವಲ್ಲ’ ಎಂಬ ಸಿದ್ದರಾಮಯ್ಯನವರ ಮಾತಿನ ಕುರಿತು ಪ್ರತಿಕ್ರಿಯಿಸಿದ ಅವರು, ‘ಅಧಿಕಾರ ಶಾಶ್ವತ ಅಲ್ಲ. ಯಾವತ್ತಿದ್ದರೂ ಅಧಿಕಾರ ಬಿಡಬೇಕು. 10 ವರ್ಷದ ನಂತರವಾದರೂ ಬಿಡಬೇಕು. ಅದನ್ನು ಯಾವಾಗ ಬಿಟ್ಟುಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ’ ಎಂದರು.
ದಲಿತ ಮುಖ್ಯಮಂತ್ರಿ ವಿಚಾರ ತಳ್ಳಿಹಾಕಿದ ಸಚಿವರು, ‘ಈ ಅವಧಿಯಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಯಾವುದೇ ಚರ್ಚೆ ಇಲ್ಲ. ಮುಖ್ಯಮಂತ್ರಿ ಬಗ್ಗೆ ಎಲ್ಲ ಮುಗಿದಿದೆ. ಈಗ ಮತ್ತೆ ಶುರು ಮಾಡುವುದು ಬೇಡ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.