ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಶುಕ್ರವಾರ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ‘ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ’ ಎಂದು ಪುನರುಚ್ಚರಿಸಿದ್ದಾರೆ.
‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂಥ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ. ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
‘ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ ನವೆಂಬರ್ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿರುವ ಚರ್ಚೆಯನ್ನು ಸ್ಪಷ್ಟವಾಗಿ ಅಲ್ಲಗಳೆದ ಸಿದ್ದರಾಮಯ್ಯ, ‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂದು ಕೆಲವರು ಹೇಳುತ್ತಿದ್ದಾರೆ. ಅವರಿಗೆ ಹೆಚ್ಚಿನ ಸಂಖ್ಯೆಯ ಶಾಸಕರ ಬೆಂಬಲ ಇಲ್ಲ’ ಎಂದು ದೆಹಲಿಯಲ್ಲಿ ಗುರುವಾರ ಹೇಳಿದ್ದರು.
ಕರ್ನಾಟಕದಲ್ಲಿ ನವೆಂಬರ್ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿರುವ ಚರ್ಚೆಯನ್ನು ಸ್ಪಷ್ಟವಾಗಿ ಅಲ್ಲಗಳೆದ ಸಿದ್ದರಾಮಯ್ಯ, ‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂದು ಕೆಲವರು ಹೇಳುತ್ತಿದ್ದಾರೆ. ಅವರಿಗೆ ಹೆಚ್ಚಿನ ಸಂಖ್ಯೆಯ ಶಾಸಕರ ಬೆಂಬಲ ಇಲ್ಲ’ ಎಂದು ಹೇಳಿದ್ದರು.
ಸಾಮಾಜಿಕ ಮಾಧ್ಯಮದಲ್ಲಿ ಶುಕ್ರವಾರ ಅದನ್ನೇ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.