
ಸಿದ್ದರಾಮಯ್ಯ
ಬೆಂಗಳೂರು: ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇಂದು (ಗುರುವಾರ) ಹೇಳಿದ್ದಾರೆ.
ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಈ ಕುರಿತು ಸಿದ್ದರಾಮಯ್ಯ ಮಾತನಾಡಿದ್ದಾರೆ.
ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಅನ್ನೋ ಮೌಢ್ಯ ಪ್ರಚಲಿತದಲ್ಲಿ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದು ಹೇಳಿದ್ದಾರೆ.
ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.