ADVERTISEMENT

ಪಿಯುಸಿವರೆಗೂ ಆನ್‌ಲೈನ್‌ ಶಿಕ್ಷಣ ಬೇಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 11 ಜೂನ್ 2020, 7:48 IST
Last Updated 11 ಜೂನ್ 2020, 7:48 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಮೈಸೂರು: ‘ಐದನೇ ತರಗತಿಯವರೆಗೆ ಆನ್‌ಲೈನ್‌ ಶಿಕ್ಷಣ ರದ್ದುಗೊಳಿಸಿ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಪಿಯುಸಿವರೆಗೂ ಆನ್‌ಲೈನ್‌ ಶಿಕ್ಷಣ ಬೇಡ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಆನ್‌ಲೈನ್‌ ಮೂಲಕ ಶಿಕ್ಷಣ ಕೊಡುವಂತಹದ್ದು ಸರಿಯಾದ ಪದ್ಧತಿ ಅಲ್ಲ. ಪಿಯುಸಿವರೆಗೂ ಮಕ್ಕಳಿಗೆ ನೇರ ಪಾಠ ಮಾಡುವುದೇ ಆಗಬೇಕು. ತರಗತಿಯಲ್ಲಿ ಪಾಠ ಮಾಡುವಷ್ಟು ಪರಿಣಾಮಕಾರಿಯಾಗಿ ಆನ್‌ಲೈನ್‌ನಲ್ಲಿ ಪಾಠ ಮಾಡಲು ಸಾಧ್ಯವಿಲ್ಲ ಎಂದು ಗುರುವಾರ ಇಲ್ಲಿ ಸುದ್ದಿಗಾರರಲ್ಲಿ ತಿಳಿಸಿದರು.

‘ನನ್ನ ಪ್ರಕಾರ ಅಕ್ಟೋಬರ್‌ ತಿಂಗಳವರೆಗೆ ಶಾಲೆಗಳನ್ನು ಆರಂಭಿಸಬಾರದು. ಆ ಬಳಿಕ ಕೊರೊನಾ ಪರಿಸ್ಥಿತಿಯನ್ನು ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.