ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಭೆಗೆ ಗೈರಾಗಿರುವ ಬಿಜೆಪಿಗರು ಬೆಂಗಳೂರು ಅಭಿವೃದ್ಧಿಯ ವಿರೋಧಿಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ ಅವರು ಹಾಜರಾಗಲಿಲ್ಲ. ತಾವು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿದ್ದಾರೆ. ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ’ ಎಂದರು.
‘ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ, ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.