ADVERTISEMENT

ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದೂ, ದೇವರ ಬಗ್ಗೆ ಪ್ರೀತಿ, ಭಕ್ತಿ ಇದೆ: ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಸೆಪ್ಟೆಂಬರ್ 2025, 12:46 IST
Last Updated 22 ಸೆಪ್ಟೆಂಬರ್ 2025, 12:46 IST
<div class="paragraphs"><p>ಸಿದ್ದರಾಮಯ್ಯ&nbsp;, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ , ಮುಖ್ಯಮಂತ್ರಿ

   

ಮೈಸೂರು: ಮೈಸೂರಿನ ಮಾಜಿ ಸಂಸದರಿಗಿಂತ ನಾನು ನೈಜ ಮತ್ತು ಉತ್ತಮ ಹಿಂದೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ದಸರಾ ಅಂಗವಾಗಿ ಸೋಮವಾರ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನಲ್ಲಿ ಸೋಲಾಯಿತು’ ಎಂದು ಹೇಳಿದ್ದಾರೆ.

ADVERTISEMENT

‘ನನ್ನ ಹೆಸರಿನಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು. ನನಗೆ ದೇವರ ಬಗ್ಗೆ ಪ್ರೀತಿ, ಭಕ್ತಿ ಎಲ್ಲವೂ ಇದೆ. ಬೇರೆಯವರಂತೆ ದೇವರ ಹೆಸರಲ್ಲಿ ದ್ವೇಷ ಹರಡುವವರು ನಾವಲ್ಲ. ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ ಸಂವಿಧಾನದ ಪೀಠಿಕೆ ಓದಲು ಹೇಳಿದೆ’ ಎಂದರು.

ಎರಡು ಬಾರಿ ಸಂಸದರಾಗಿದ್ದವರು ಬಾನು ಮುಷ್ತಾಕ್ ಅವರಿಗೆ ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನಾನು ಅವರಿಗಿಂತ ನೈಜ ಮತ್ತು ಉತ್ತಮ ಹಿಂದೂ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.