
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಕುರಿತು ಅವರ ಮಗ ಯತೀಂದ್ರ ಅವರು ಆಡಿದ ಮಾತು ಶುಕ್ರವಾರ ಮತ್ತೆ ಚರ್ಚೆಗೆ ಒಳಗಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಗುರುತಿಸಿಕೊಂಡ ಶಾಸಕರು ಯತೀಂದ್ರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಜತೆಗೆ ಗುರುತಿಸಿಕೊಂಡವರು ‘ಹೇಳಿಕೆಯಲ್ಲಿ ತಪ್ಪಿಲ್ಲ’ ಎನ್ನುತ್ತಲೇ, ‘ಉತ್ತರಾಧಿಕಾರಿ’ಯಾಗಲು ತಾವೂ ಸಿದ್ಧ ಎಂದು ಸುಳಿವು ನೀಡಿದ್ದಾರೆ.
‘ಮಾತಾಡುವಲ್ಲಿ ಮಾತಾಡುವೆ’
ಅಧಿಕಾರ ಹಸ್ತಾಂತರ, ನಾಯಕತ್ವ ಕುರಿತು ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಮ್ಮ ಪಕ್ಷದಲ್ಲಿ ಶಿಸ್ತಿಗೆ ಆದ್ಯತೆ. ಯತೀಂದ್ರ ಸೇರಿದಂತೆ ಯಾರ ವಿಚಾರವಾದರೂ ಅಷ್ಟೆ. ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಎಲ್ಲವನ್ನೂ ಗಮನಿಸಿದ್ದೇನೆ. ಈ ವಿಚಾರವಾಗಿ ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತೇನೆ.-ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.