ADVERTISEMENT

ಸಿದ್ದರಾಮಯ್ಯಗೆ ವ್ಯಾಕರಣ ಗೊತ್ತಿಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2019, 6:21 IST
Last Updated 26 ಅಕ್ಟೋಬರ್ 2019, 6:21 IST
   

ಚಿತ್ರದುರ್ಗ: ಏಕವಚನ ಮತ್ತು ಬಹುವಚನದ ವ್ಯತ್ಯಾಸ ಗೊತ್ತಿಲ್ಲದ ಸಿದ್ದರಾಮಯ್ಯ ಅವರಿಗೆ ವ್ಯಾಕರಣ ಬರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಆರೋಪಿಸಿದರು.

ಹಿರಿಯೂರು ತಾಲ್ಲೂಕಿನ ಹೊಸ ಯಳನಾಡು ಗ್ರಾಮದಲ್ಲಿ ಮಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

ಸಿದ್ದರಾಮಯ್ಯ ವ್ಯಾಕರಣ ಮೇಸ್ಟ್ರು. ಆದರೂ ವ್ಯಾಕರಣ ಗೊತ್ತಿಲ್ಲ. ನಾವು ಏಕವಚನ ಮತ್ತು ಬಹುವಚನ ಕಲಿತಿದ್ದೇವೆ. ಹಾಗಾಗಿ ಗೌರವ ಕೊಟ್ಟು ಮಾತನಾಡುತ್ತೇವೆ ಎಂದು ಹೇಳಿದರು.

ADVERTISEMENT

ರೈತರು, ಹಾಲು ಉತ್ಪಾದಕರ ಬಗ್ಗೆ ಬಿಜೆಪಿಗೆ ಕಾಳಜಿ ಇದೆ. ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ (ಆರ್ ಸಿ ಇ ಪಿ) ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ರೈತರ ಹಿತ ಕಾಪಾಡುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇವೆ ಎಂದರು.

ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡುವ ತೀರ್ಪಿಗೆ ಕಾಯುತ್ತಿದ್ದೇವೆ. ಹಿಂದಿನ ಸ್ಪೀಕರ್ ನಿರ್ಧಾರ ಸರಿ ಇಲ್ಲ. ತೀರ್ಪು ಪ್ರಕಟವಾದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದರು.

ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.