
ಪ್ರಜಾವಾಣಿ ವಾರ್ತೆ
ಮೈಸೂರು: ‘ಸಚಿವ ಸಂಪುಟ ಪುನರ್ ರಚನೆ ಸಂಬಂಧ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜನವರಿಯಲ್ಲಿ ಚರ್ಚಿಸೋಣ ಎಂದು ಅವರು ಹೇಳಿದ್ದರು. ಸಮಯ ಕೊಟ್ಟಾಗ ದೆಹಲಿಗೆ ಹೋಗಿ ಭೇಟಿಯಾಗುತ್ತೇನೆ. ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ತೀರ್ಮಾನಿಸುತ್ತೇನೆ. ಸಂಕ್ರಾಂತಿ ಬಳಿಕ ಬಜೆಟ್ ಸಿದ್ಧತೆ ಆರಂಭಿಸುತ್ತೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.