ಬೆಳಗಾವಿ: ‘ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಟ್ವೀಟ್ ಮಾಡಿದ್ದಾರೆ.
‘ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು, ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆಗೆ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು’ ಎಂದು ಹೇಳಿದ್ದಾರೆ.
ರಾಯಣ್ಣನ ಜಯಂತಿಯ ದಿನವಾದ ಶನಿವಾರ ಅಭಿಮಾನಿಗಳು ಅವರ ಪ್ರತಿಮೆ ಪ್ರತಿಷ್ಠಾಪನೆಗೆ ನಸುಕಿನಲ್ಲಿ ಮುಂದಾಗಿದ್ದರು. ತಡೆದಪೊಲೀಸರು ಪ್ರತಿಮೆ ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.