ADVERTISEMENT

ಸುಳ್ಳು ಆರೋಪಗಳ ವಿಷ ಕುಡಿದು ವಿಷಕಂಠನ್ನಾಗಿದ್ದೇನೆ: ಸಿದ್ದರಾಮಯ್ಯ

‘ಕೊನೆಗೆ ಸತ್ಯವೇ ಗೆಲ್ಲುವುದು’ ಟ್ವಿಟರ್‌ನಲ್ಲಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 7:41 IST
Last Updated 25 ಜುಲೈ 2019, 7:41 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ’ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಅತೃಪ್ತ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

‘ಸಿದ್ದರಾಮಯ್ಯನವರು ನಮ್ಮ‌‌ನಾಯಕರು’ ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ. ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷ ಕುಡಿದು ನಾನು ವಿಷಕಂಠನ್ನಾಗಿದ್ದೇನೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ! ಎಂದು ಟ್ವಿಟರ್‌ ಮಾಡಿದ್ದಾರೆ.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.