ADVERTISEMENT

ಯಡಿಯೂರಪ್ಪ ಕಾಲ್ಗುಣದಿಂದ ಅತಿವೃಷ್ಟಿ: ಸಿದ್ದರಾಮಯ್ಯ ಲೇವಡಿ

ಸಿದ್ದರಾಮಯ್ಯ ಕಾಲ್ಗುಣದಿಂದಲೇ ಕಾಂಗ್ರೆಸ್ ನಿರ್ನಾಮ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 19:56 IST
Last Updated 15 ಸೆಪ್ಟೆಂಬರ್ 2019, 19:56 IST
   

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಇಸ್ರೋಗೆ ಕಾಲಿಟ್ಟಿದ್ದರಿಂದಲೇ ಚಂದ್ರಯಾನ ಯಶಸ್ವಿಯಾಗಲಿಲ್ಲ’ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಬೆನ್ನಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಇಂತಹುದೇ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟರ್ ವಾರ್

ADVERTISEMENT

* ಕಾಲ್ಗುಣದಂತಹ ಮೌಢ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ 2009ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು.

* ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ ಪ್ರಯೋಗ ಪ್ರಧಾನಿ ನರೇಂದ್ರ ಮೋದಿ ಹಾಜರಾದರೂ ವಿಫಲವಾಯಿತು. ಅಷ್ಟೇ ಸಮಯವನ್ನು ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಲು ಮೀಸಲಿಟ್ಟಿದ್ದರೆ ಪ್ರಾಯಶ್ಚಿತ್ತ ಮಾಡಿಕೊಂಡಂತಾಗುತಿತ್ತು.

* ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿಗೆ ಒಂದು ಗಳಿಗೆ ಬಂದು ನೆರೆ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ.

* ಸಿದ್ದರಾಮಯ್ಯ ಕಾಲ್ಗುಣದಿಂದಲೇ ಕಾಂಗ್ರೆಸ್ ನಿರ್ನಾಮವಾಯಿತು.

* ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಾಗ ಅವರ ಕಾಲ್ಗುಣದ ಬಗ್ಗೆ ತಿಳಿದಿರಲಿಲ್ಲವೆ? ಈಗ ಯಡಿಯೂರಪ್ಪ ಕಾಲ್ಗುಣದ ಬಗ್ಗೆ ಮಾತನಾಡಲು ಯಾವ ಅರ್ಹತೆ ಇದೆ?

* ಜಲಪ್ರಳಯ 10 ರಾಜ್ಯಗಳಲ್ಲಿ ಬಂದಿದೆ.

* ಮೋದಿ ಅವರನ್ನು ಪ್ರಪಂಚವೇ ಮೆಚ್ಚಿದೆ. ಸಿದ್ದರಾಮಯ್ಯ ಲೆಕ್ಕಕ್ಕಿಲ್ಲ, ತಲೆಕೆಡಿಸಿಕೊಳ್ಳಲ್ಲ.

**

ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆ ದಾರಿ ಹಿಡಿದಾಗ ಕೃಷಿ ಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತಹ ಯೋಜನೆ ಜಾರಿಗೊಳಿಸಲಾಯಿತು. ಆ ಮೂಲಕ ಆತ್ಮಹತ್ಯೆ ತಡೆದಿದ್ದೆವು
- ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.