ಇ.ಡಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ನಿವೇಶನಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ತಕರಾರು ಅರ್ಜಿ ಸಲ್ಲಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇ.ಡಿಯು ಬುಧವಾರ ಎಂಟು ಪುಟಗಳ ತಕರಾರು ಅರ್ಜಿ ಸಲ್ಲಿಸಿದೆ.
‘ಪಾರ್ವತಿ ಅವರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳು ನಮಗೆ ಲಭ್ಯವಿದೆ. ಇದರಲ್ಲಿ ವಿಸ್ತೃತ ತನಿಖೆ ಆಗಬೇಕು. ಹೀಗಾಗಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಬೇಕು’ ಎಂದು ಇ.ಡಿ ಕೋರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.