ಜಿ.ಪರಮೇಶ್ವರ
ತುಮಕೂರು: ‘ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ‘ಸಿಎಂ ಬದಲಾವಣೆ ಆಗುತ್ತಾರೆ ಎಂದು ಹೇಳಿದವರು ಯಾರು? ಸಿದ್ದರಾಮಯ್ಯನವರು ಈಗ ಮುಖ್ಯಮಂತ್ರಿಯಾಗಿದ್ದಾರೆ, ಅವರೇ ಮುಂದುವರಿಯುತ್ತಾರೆ’ ಎಂದರು.
‘ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ’ ಎಂದು ಸ್ವತಃ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಇಷ್ಟೆಲ್ಲಾ ಹೇಳಿಯೂ ಕೂಡ ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ತೀರ್ಮಾನ ಒಪ್ಪಿಕೊಳ್ಳುತ್ತೇನೆ ಅಂತನೂ ಅವರೇ ಹೇಳಿದ್ದಾರೆ. ನಮ್ಮಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ. ಗಾಂಧಿ ಜಯಂತಿ ದಿನ ಶಾಂತಿ ಹೇಳಬೇಕೆ ಹೊರತು ಕ್ರಾಂತಿ ಅಲ್ಲ’ ಎಂದರು.
‘ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆಂದು ಯಾರು ಹೇಳಿದರು? ಸಿದ್ದರಾಮಯ್ಯ ಈಗ ಮುಖ್ಯಮಂತ್ರಿಯಾಗಿದ್ದಾರೆ, ಅವರೇ ಐದು ವರ್ಷವೂ ಮುಂದುವರಿಯುತ್ತಾರೆಜಿ.ಪರಮೇಶ್ವರ, ಗೃಹ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.