ADVERTISEMENT

ಸಿದ್ದರಾಮಯ್ಯ ಬಿಜೆಪಿ ಸೇರುತ್ತಾರೆ, ಜಿಟಿಡಿಯೂ ಸಂಪರ್ಕದಲ್ಲಿದ್ದಾರೆ: ಚಿಂಚನಸೂರ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 20:35 IST
Last Updated 6 ಮಾರ್ಚ್ 2020, 20:35 IST
ಬಾಬುರಾವ ಚಿಂಚನಸೂರ
ಬಾಬುರಾವ ಚಿಂಚನಸೂರ   

ಕಲಬುರ್ಗಿ: ‘ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರುಮುಂದಿನ ದಿನಗಳಲ್ಲಿ ಬಿಜೆಪಿ ಸೇರಲಿದ್ದಾರೆ. ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಬಿಜೆಪಿ ಸಂಪರ್ಕದಲ್ಲಿದ್ದು, ಹೈಕಮಾಂಡ್‌ನಿಂದ ಹಸಿರು ನಿಶಾನೆ ಸಿಕ್ಕ ಬಳಿಕ, ಅವರೂ ಪಕ್ಷ ಸೇರಲಿದ್ದಾರೆ’ಎಂದು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋಲಿ ಸಮಾಜದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ಬಾರಿಯ ಬಜೆಟ್‌ನಲ್ಲಿ ₹ 50 ಕೋಟಿ ಅನುದಾನ ಒದಗಿಸಿದ್ದು, ಸಮಾಜದ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತಲಾ ₹ 5 ಲಕ್ಷ ನೆರವು ನೀಡಲಾಗುವುದು. ಆರ್ಥಿಕವಾಗಿ ಹಿಂದುಳಿದವರಿಗೆ ಆಟೊ ಖರೀದಿಗೆ, ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಳ್ಳಲು ಬಳಕೆ ಮಾಡಲಾಗುವುದು’ ಎಂದರು. ಆದರೆ, ಯೋಜನೆಯ ಹೆಚ್ಚಿನ ವಿವರ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT