
ಅಶೋಕ ಪಟ್ಟಣ
ಕೊಪ್ಪಳ: ‘ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಈಗಾಗಲೇ ಎಲ್ಲ ನಾಯಕರೂ ಹೇಳಿದ್ದು, ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದು ಈಗಾಗಲೇ ಖುದ್ದು ಸಿದ್ದರಾಮಯ್ಯನವರೇ ತಿಳಿಸಿದ್ದಾರೆ. ಹೀಗಾಗಿ ತ್ಯಾಗದ ಪ್ರಶ್ನೆ ಬರುವುದಿಲ್ಲ. ಅವರು ತ್ಯಾಗ ಮಾಡುವುದಿಲ್ಲ’ ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆಯೂ ಉತ್ತಮ ಬಾಂಧವ್ಯವಿದೆ. ಡಿಕೆಶಿ ಸಿ.ಎಂ. ಆದರೂ ನನಗೆ ಸಂತೋಷ. ರಾಹುಲ್ ಗಾಂಧಿ ಹಾಗೂ ಎಲ್ಲ ಶಾಸಕರ ಭಾವನೆ ಸಿದ್ದರಾಮಯ್ಯನವರೇ ಮುಂದುವರಿಯಬೇಕು ಎನ್ನುವುದಾಗಿದೆ’ ಎಂದರು.
‘ಸಿದ್ದರಾಮಯ್ಯ ಎರಡೂವರೆ ವರ್ಷ ಉತ್ತಮ ಆಡಳಿತ ನೀಡಿದ್ದು, 2028ರ ಚುನಾವಣೆಗೆ ಬೇಕಾದರೆ ಶಿವಕುಮಾರ್ ತಮ್ಮ ಬೇಡಿಕೆ ಸಲ್ಲಿಸಲಿ. ಈಗ ಬೇರೆ ಯಾರೇ ಸಿ.ಎಂ. ಆದರೂ ಸರ್ಕಾರ ನಡೆಸುವುದು ಕಷ್ಟವಿದೆ. ಆದ್ದರಿಂದ ಸಿದ್ದರಾಮಯ್ಯ ಮುಂದುವರಿಯಲಿ ಎನ್ನುವ ಆಸೆಯಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.