ADVERTISEMENT

ಕಾಂಗ್ರೆಸ್ ಸಂವೇದನಾಶೀಲತೆ ಕಳೆದುಕೊಂಡಿತೇ: ಸಿ.ಟಿ. ರವಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 21:31 IST
Last Updated 3 ಆಗಸ್ಟ್ 2022, 21:31 IST
ಸಿ.ಟಿ. ರವಿ
ಸಿ.ಟಿ. ರವಿ   

ಚಿಕ್ಕಮಗಳೂರು: ‘ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಇಂಥ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿದ್ದು ಸರಿಯೇ, ಕಾಂಗ್ರೆಸ್ ಸಂವೇದನಾಶೀಲತೆ ಕಳೆದುಕೊಂಡಿತೇ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನರು ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಈ ಸಂಭ್ರಮ ಆಚರಿಸಬೇಕಿತ್ತೇ ಎಂಬುದನ್ನು ಆ ಪಕ್ಷ ಯೋಚಿಸಬೇಕಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ವರ್ಷ ತುಂಬಿತ್ತು. ಜುಲೈ 28ರಂದು ಜನೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದೆವು, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆಯಾಗಿದ್ದರಿಂದ ಕಾರ್ಯಕ್ರಮ ಕೈಬಿಟ್ಟೆವು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT