ADVERTISEMENT

ಸಿದ್ದರಾಮಯ್ಯ– ಎಚ್‌.ಡಿ. ದೇವೇಗೌಡ ಚರ್ಚೆ; ‘ಸಂಪುಟ ವಿಸ್ತರಣೆ ಶೀಘ್ರ’

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2018, 19:47 IST
Last Updated 19 ನವೆಂಬರ್ 2018, 19:47 IST
ಎಚ್‌.ಡಿ. ದೇವೇಗೌಡ ಮತ್ತು ಸಿದ್ದರಾಮಯ್ಯ ಚರ್ಚೆ ನಡೆಸಿದರು
ಎಚ್‌.ಡಿ. ದೇವೇಗೌಡ ಮತ್ತು ಸಿದ್ದರಾಮಯ್ಯ ಚರ್ಚೆ ನಡೆಸಿದರು   

ಬೆಂಗಳೂರು: ‘ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರ ನಡೆಯಲಿದೆ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು.

ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಜೊತೆ ಕುಮಾರಕೃಪಾದಲ್ಲಿ ಸೋಮವಾರ ಕೆಲಹೊತ್ತು ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಸಂಪುಟ ವಿಸ್ತರಣೆ ಕುರಿತಂತೆ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ. ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನಕ್ಕೆ ಬರುತ್ತೇವೆ’ ಎಂದು
ಹೇಳಿದರು.

ADVERTISEMENT

ಕಬ್ಬು ಬೆಳೆಗಾರರ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ನಾನು ಮಾತನಾಡುವುದಿಲ್ಲ. ಸಿದ್ದರಾಮಯ್ಯ ಕೂಡ ಅಧಿಕಾರದಲ್ಲಿಲ್ಲ. ಅಧಿಕಾರದಲ್ಲಿ ಇಲ್ಲದ ನಾವು ಏನು ಹೇಳೋಣ’ ಎಂದರು.

ಸಿದ್ದರಾಮಯ್ಯ ಮಾತನಾಡಿ, ‘ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ನಾನೂ ಮಾತನಾಡುತ್ತೇನೆ’ ಎಂದರು.

‘ಸಂಪುಟ ವಿಸ್ತರಣೆ ಸೇರಿದಂತೆ ಅನೇಕ ವಿಚಾರಗಳನ್ನು ನಾನು ಮತ್ತು ದೇವೇಗೌಡರು ಹಂಚಿಕೊಂಡಿದ್ದೇವೆ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.