ADVERTISEMENT

14ರಿಂದ ಸಿಗಂದೂರು ಚೌಡೇಶ್ವರಿ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 8 ಜನವರಿ 2023, 19:30 IST
Last Updated 8 ಜನವರಿ 2023, 19:30 IST
ಸಿಗಂದೂರು ಚೌಡೇಶ್ವರಿ ದೇವಿಯ ಮೂರ್ತಿ
ಸಿಗಂದೂರು ಚೌಡೇಶ್ವರಿ ದೇವಿಯ ಮೂರ್ತಿ   

ತುಮರಿ: ನಾಡಿನ ಪ್ರಸಿದ್ಧ ಶಕ್ತಿ ದೇವತೆ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಜನವರಿ 14, 15ರಂದು ಮಕರ ಸಂಕ್ರಮಣದ ಅಂಗವಾಗಿ ಜಾತ್ರಾ ಮಹೋತ್ಸವ ನಡೆಯಲಿದೆ.

ಜ.14ರಂದು ಬೆಳಿಗ್ಗೆ 7ಕ್ಕೆ ಚೌಡೇಶ್ವರಿ ದೇವಿಯ ಮೂಲ ಸ್ಥಳವಾದ ಸೀಗೆ ಕಣಿವೆಯಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ಜಾತ್ರೋತ್ಸವ ಉದ್ಘಾಟಿಸುವರು ಎಂದು ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಎಸ್. ರಾಮಪ್ಪ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೀಗೆ ಕಣಿವೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರಥಮ ಪೂಜೆ ನಡೆಯಲಿದೆ. ನಂತರ ಧರ್ಮಾಧಿಕಾರಿ ನೇತೃತ್ವದಲ್ಲಿ ಜ್ಯೋತಿ ರೂಪದ ದೇವಿಯ ಮೆರವಣಿಗೆ ನಡೆಯಲಿದ್ದು, ವಡನ್‌ಬೈಲ್ ಪದ್ಮಾವತಿ ದೇವಸ್ಥಾನದ ಧರ್ಮದರ್ಶಿ ವೀರರಾಜಯ್ಯ ಜೈನ್ ಚಾಲನೆ ನೀಡಲಿದ್ದಾರೆ. ದೇವಿಗೆ ಪ್ರತಿದಿನ ವಿವಿಧ ಅಭಿಷೇಕ, ಅಲಂಕಾರ ಪೂಜೆ ನಡೆಯಲಿದೆ.

ADVERTISEMENT

ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಸಭೆ ಏರ್ಪಡಿಸಲಾಗಿದ್ದು, ಕಲೆ, ಶಿಕ್ಷಣ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಸಂಜೆ 5ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಜ. 15ರಂದು ರಾತ್ರಿ 8ಕ್ಕೆ ಗಾನ ವೈಭವ ನಡೆಯಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.