ADVERTISEMENT

ಸಿಗಂದೂರು: ಮೇಲ್ವಿಚಾರಣಾ ಸಮಿತಿ ರದ್ದತಿ ಕೋರಿದ್ದ ಅರ್ಜಿ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 13:03 IST
Last Updated 14 ಡಿಸೆಂಬರ್ 2020, 13:03 IST

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಜಿಲ್ಲಾಧಿಕಾರಿ ನೇಮಿಸಿದ ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿ ರದ್ದತಿ ಕೋರಿ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೋಮವಾರ ಹೈಕೋರ್ಟ್ ಸೂಚಿಸಿದೆ.

ಸಲಹಾ ಮತ್ತು ಮೇಲ್ವಿಚಾರಣಾ ಸಮಿತಿ ರದ್ದುಗೊಳಿಸುವಂತೆ ಕೋರಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ದಿನೇಶ್‌ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ದೇವಸ್ಥಾನ ಖಾಸಗಿ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿದೆ. ಇದರಲ್ಲಿ ಸರ್ಕಾರದ ಪಾತ್ರ ಏಕೆ ಎಂದು ಪ್ರಶ್ನಿಸಿದ ನ್ಯಾಯಮೂರ್ತಿಗಳು, ಮುಂದಿನ ವಿಚಾರಣೆವರೆಗೂ ಧರ್ಮದರ್ಶಿ ರಾಮಪ್ಪ ನೇತೃತ್ವದ ಆಡಳಿತ ಮಂಡಳಿಯೇ ದೇವಸ್ಥಾನದ ಉಸ್ತುವಾರಿ ಮುಂದುವರಿಸಿಕೊಂಡು ಹೋಗಬೇಕು. ದೇವಸ್ಥಾನದ ನಿತ್ಯದ ಆಡಳಿತದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಮೌಖಿಕವಾಗಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.