ADVERTISEMENT

ರೇಷ್ಮೆ: ಅಡಮಾನ ಸಾಲ ಮಿತಿ ಏರಿಕೆ

ರೀಲರ್ಸ್‌, ವ್ಯಾಪಾರಿಗಳ ಸಮಸ್ಯೆ ಆಲಿಸಿದ ತೋಟಗಾರಿಕಾ ಸಚಿವ ನಾರಾಯಣ ಗೌಡ

​ಪ್ರಜಾವಾಣಿ ವಾರ್ತೆ
Published 9 ಮೇ 2020, 19:45 IST
Last Updated 9 ಮೇ 2020, 19:45 IST
   

ಬೆಂಗಳೂರು: ‘ರೇಷ್ಮೆ ನೂಲು ಬಿಚ್ಚಣಿಕೆದಾರರಿಗೆ (ರೀಲರ್ಸ್) ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅಡಮಾನ ಸಾಲ ಮಿತಿ ₹ 1 ಲಕ್ಷದಿಂದ ₹ 2 ಲಕ್ಷಕ್ಕೆ ಏರಿಸಲಾಗುವುದು’ ಎಂದು ತೋಟಗಾರಿಕಾ ಸಚಿವ ನಾರಾಯಣ ಗೌಡ ತಿಳಿಸಿದರು.

‘ರೇಷ್ಮೆಗೆ ಹೆಚ್ಚಿನ ದರ ನಿಗದಿ ಮಾಡುವ ಬಗ್ಗೆಯೂ ಪರಿಶೀಲಿಸಲಾಗುತ್ತದೆ. ಹೊರ ರಾಜ್ಯಗಳಿಗೆ ರೇಷ್ಮೆ ಸಾಗಿಸಲು ಕೂಡ ಅನುಮತಿ ನೀಡಲಾಗುವುದು’ ಎಂದೂ ಹೇಳಿದರು.

ರಿಲರ್ಸ್ ಮತ್ತು ವ್ಯಾಪಾರಿಗಳ ಜೊತೆ ಶನಿವಾರ ಪ್ರತ್ಯೇಕ ಸಭೆ ನಡೆಸಿದ ಸಚಿವರು, ಸದ್ಯದ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದರು.

ADVERTISEMENT

‘ಕೋವಿಡ್ 19 ನಂತರದ ಪರಿಸ್ಥಿತಿಯನ್ನು ಸಚಿವರಿಗೆ ವಿವರಿಸಿದ ವ್ಯಾಪಾರಿಗಳು, ಲಾಕ್‌ಡೌನ್ ಮುಗಿದ ಬಳಿಕ ಚೀನಾ, ಮತ್ತಿತರ ದೇಶಗಳಿಂದ ರೇಷ್ಮೆ ಆಮದಾದರೆ ದರ ಕುಸಿಯಬಹುದು. ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.