ಬಿಜೆಪಿ, ಕಾಂಗ್ರೆಸ್
ಬೆಂಗಳೂರು: ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಮಾಡಿಕೊಳ್ಳುವ ಯುವಕ–ಯುವತಿಯರಿಗೆ ಗಣೇಶನ ಚಿತ್ರ ಒಳಗೊಂಡ ಬೆಳ್ಳಿ ಸಾಮಗ್ರಿ ನೀಡಲಾಗುತ್ತಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ದೇಶದ ಭವಿಷ್ಯ ರೂಪಿಸುವ ಪ್ರಜೆಗಳಿಗೆ ಆಮಿಷ ಒಡ್ಡುವ ಮೂಲಕ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದೆ. ಗಣಪತಿ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಿದವರಿಗೆ ಬೆಂಬಲ ನೀಡುವ ಕಾಂಗ್ರೆಸ್, ಇನ್ನೊಂದೆಡೆ ಬೆಳ್ಳಿ ಗಣೇಶನನ್ನು ನೀಡಿ ಸದಸ್ಯತ್ವ ಮಾಡಿಸುವುದು ವಿಪರ್ಯಾಸ ಎಂದರು.
ಹಣ, ಬೆಳ್ಳಿ ನೀಡಿ ಆಮಿಷ ಒಡ್ಡುವುದು ಸಂವಿಧಾನಬಾಹಿರ. ಯುವ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.