ವಿಜಯಪುರ: ಸಿಂದಗಿ ವಿಧಾನಸಭೆ ಉಪಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಮೂವರು ಶಿಕ್ಷಕರನ್ನು ಕರ್ತವ್ಯಲೋಪದ ಆರೋಪದ ಮೇರೆಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅಮಾನತುಗೊಳಿಸಿದ್ದಾರೆ.
ಸಿಂದಗಿ ವಿದ್ಯಾನಗರದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ-04ರ ಸಹ ಶಿಕ್ಷಕರಾದ ವಿ.ವಿ.ನಿಂಬರ್ಗಿ, ಎಸ್.ಆರ್.ಸಿಂದಗಿ ಹಾಗೂ ಆರ್.ಎ.ಕಠಾರೆ ಅವರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.