ADVERTISEMENT

ಗಾಯಕಿ ಎಸ್.ಜಾನಕಿ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 4 ಮೇ 2019, 9:05 IST
Last Updated 4 ಮೇ 2019, 9:05 IST
   

ಮೈಸೂರು: ಗಾಯಕಿ ಎಸ್.ಜಾನಕಿ ಅವರು ನಗರದ ಸಂಬಂಧಿಕರ ಮನೆಗೆ ಬಂದಿದ್ದಾಗ ಜಾರಿ ಬಿದ್ದು ಸೊಂಟದ ಮೂಳೆ ಮುರಿದಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಒಂದು ವಾರದ ಹಿಂದೆಯೇ ಜಾನಕಿ ಮೈಸೂರಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಶುಕ್ರವಾರ ಜಾರಿ ಬಿದ್ದು ಸೊಂಟದ‌ ಮೂಳೆ ಮುರಿದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆ ಮುಂದುವರೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT