ADVERTISEMENT

ಗಾಯಕ ಎಸ್‌ಪಿಬಿ ನಿಧನ: ಸಚಿವ ರಮೇಶ್ ಜಾರಕಿಹೊಳಿ ಶೋಕ ಸಂದೇಶ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 10:19 IST
Last Updated 25 ಸೆಪ್ಟೆಂಬರ್ 2020, 10:19 IST
   

ಬೆಂಗಳೂರು: ಹೆಸರಾಂತ ಗಾಯಕ ಡಾ. ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ.

'ಗಾನ ಗಂಧರ್ವ ಡಾ. ಎಸ್​.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ ಪಡೆದಿದ್ದ ಎಸ್‌ಪಿಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ ತುಂಬಾ ಬಡವಾಗಿದೆ' ಎಂದು ಜಾರಕಿಹೊಳಿ ತಿಳಿಸಿದ್ದಾರೆ.

'ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ‌ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್‌ಪಿಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ' ಎಂದು ಹೇಳಿದ್ದಾರೆ.

ADVERTISEMENT

ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ ಸಂಗೀತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.