ಬಿ.ವೈ.ವಿಜಯೇಂದ್ರ
ಬೆಂಗಳೂರು: ‘ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ರಚಿಸಲು ಒತ್ತಡ ಹಾಕಿದವರು ಯಾರು ಎನ್ನುವುದನ್ನು ಬಹಿರಂಗಪಡಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆ ತಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಾವ ಮಾತಿನಂತೆ ಮುಖ್ಯಮಂತ್ರಿ ಇಂಥ ದೊಡ್ಡ ನಿರ್ಧಾರ ಪ್ರಕಟಿಸಿದರು? ಎಸ್‍ಐಟಿ ರಚನೆ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಎಷ್ಟು ಅಪಪ್ರಚಾರ ನಡೆದಿದೆ ಎನ್ನುವ ಕುರಿತು ಮುಖ್ಯಮಂತ್ರಿ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.
‘ಧರ್ಮಸ್ಥಳದ ವಿರುದ್ಧ ಪಿತೂರಿ ನಡೆಸಿದ ತಂಡವು ಎಸ್‍ಐಟಿ ರಚಿಸಲು ಕೋರಿ ಅರ್ಜಿ ಹಾಕಿದ್ದಾಗಿ ಕೋರ್ಟ್‌ಗೆ ಅನಿಸಿತ್ತು. ಇದರ ಹಿಂದೆ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ, ವೈಯಕ್ತಿಕ ಹಿತಾಸಕ್ತಿ ಇದರ ಹಿಂದಿದೆ ಎಂದು ಸುಪ್ರೀಂಕೋರ್ಟ್ ಮೇ ತಿಂಗಳಿನಲ್ಲೇ ಹೇಳಿತ್ತು. ಈ ವಿಷಯ ಮುಚ್ಚಿಟ್ಟು ಎಸ್‌ಐಟಿ ರಚನೆಗೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು’ ಎಂದು ವಿಜಯೇಂದ್ರ ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.