ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕ ರೊಷನ್ ಬೇಗ್ ಅವರಿಗೆಐಎಂಎ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲೇಎಸ್‌ಐಟಿ ನೋಟಿಸ್ ಜಾರಿ ಮಾಡಿದೆ.
ಐಎಂಎ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ರೋಷನ್ ಬೇಗ್ ಅವರಿಗೆ ಗುರುವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ.
ಕಾಂಗ್ರೆಸ್ ಹಿರಿಯ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದರು. ಇದರಿಂದ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.