ADVERTISEMENT

ಚಿಕ್ಕಬಳ್ಳಾಪುರದಲ್ಲಿ ಹುಣಸೋಡು ಮಾದರಿ ದುರಂತ: ಜಿಲೆಟಿನ್‌ ಸ್ಫೋಟದಲ್ಲಿ 6 ಸಾವು 

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 9:04 IST
Last Updated 23 ಫೆಬ್ರುವರಿ 2021, 9:04 IST
ದುರಂತ ಸ್ಥಳಕ್ಕೆ ಆಗಮಿಸುತ್ತಿರುವ ಅಧಿಕಾರಿಗಳ ದಂಡು
ದುರಂತ ಸ್ಥಳಕ್ಕೆ ಆಗಮಿಸುತ್ತಿರುವ ಅಧಿಕಾರಿಗಳ ದಂಡು    

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹಿರೇನಾಗವಲ್ಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ದುರಂತದಲ್ಲಿ ಮೂರವ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿಣ ಡಾ.ಕೆ.ಸುಧಾಕರ್‌ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ADVERTISEMENT

ಮೃತರ ವಿವರ

ಓರ್ವ ಹೀರೇನಾಗವಲ್ಲಿ ಗಾಮದವರು. ಆಂಧ್ರ ಪ್ರದೇಶದ ಮೂವರು, ನೇಪಾಳದ ಒಬ್ಬರು, ಬಾಗೇಪಲ್ಲಿಯ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಆರು ಜನರ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ರಾಮು, ಮಹೇಶ್, ಮುರಳಿ, ಗಂಗಾಧರ್, ಉಮಾಕಾಂತ್, ಅಭಿ ಎಂಬುವವರು ಘಟನೆಯಲ್ಲಿ ಪ್ರಾಣ ಬಿಟ್ಟಿದ್ದಾರೆ.

ಇವರೆಲ್ಲರೂಬ್ರಮರವಾಸಿನಿ ಎಂಬ ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕ್ರಷರ್‌ನಾಗರಾಜ ರೆಡ್ಡಿ ಎಂಬುವವರ ಒಡೆತನಕ್ಕೆ ಸೇರಿದ್ದಾಗಿದೆ.

ಕ್ರಷರ್‌ ಮಾಲೀಕನಾಗರಾಜ ರೆಡ್ಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.