ADVERTISEMENT

ಚಿತ್ರದುರ್ಗ: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಬಂಧನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 4:58 IST
Last Updated 10 ನವೆಂಬರ್ 2022, 4:58 IST
ಮುರುಘಾ ಮಠದ ಶಿವಮೂರ್ತಿ ಶ್ರೀ ಜೊತೆ ಎಸ್‌.ಕೆ ಬಸವರಾಜನ್ (ಫೈಲ್ ಫೋಟೊ)
ಮುರುಘಾ ಮಠದ ಶಿವಮೂರ್ತಿ ಶ್ರೀ ಜೊತೆ ಎಸ್‌.ಕೆ ಬಸವರಾಜನ್ (ಫೈಲ್ ಫೋಟೊ)   

ಚಿತ್ರದುರ್ಗ: ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಬಂಧಿತರಾಗಿರುವ ಹೊಸಹಳ್ಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೋಹನಮೂರ್ತಿ ಹಾಗೂ ಡಿಪ್ಲೊಮಾ ಕಾಲೇಜು ಉಪನ್ಯಾಸಕ ಶಿವಾನಂದಸ್ವಾಮಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಬಸವರಾಜನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಫೋಟೊ ತೆಗೆಯಲು ಬಸವರಾಜನ್ ಪ್ರಚೋದನೆ ಮಾಡಿದ್ದಾರೆ ಎಂಬ ಆರೋಪವಿದ ಮೇರೆಗೆ ಬಂಧಿಸಿದರು.

ಮತ್ತೊಬ್ಬ ಆರೋಪಿ ಶ್ರೀನಿವಾಸ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಸವರಾಜನ್ ಪತ್ನಿ ಸೌಭಾಗ್ಯ ಅವರಿಗೂ ಶೋಧ ನಡೆಸಲಾಗಿದೆ.

ADVERTISEMENT

ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ 47 ಫೋಟೊಗಳು ಅ.6ರಂದು ಕಳುವಾಗಿದ್ದವು. ಮಠಕ್ಕೆ ಗಣ್ಯರು ಭೇಟಿ ನೀಡಿದ ಸಂದರ್ಭದಲ್ಲಿ ಮುರುಘಾ ಶರಣರು ತೆಗೆಸಿಕೊಂಡ ಫೋಟೊಗಳನ್ನು ರಾಜಾಂಗಣದಲ್ಲಿ ಹಾಕಲಾಗಿತ್ತು. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದ ಆಧಾರದ ಮೇರೆಗೆ ನ.7ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.