ನವದೆಹಲಿ: ಸಾಹಿತ್ಯ, ತತ್ವಶಾಸ್ತ್ರ, ಸಂಸ್ಕೃತಿ ಹಾಗೂ ಬೌದ್ಧಿಕ ವಲಯಕ್ಕೆ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ಭೈರಪ್ಪ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಅವರು, ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಜಾಗತಿಕ ಮಟ್ಟದಲ್ಲಿಯೂ ಪ್ರಸಿದ್ಧಿಗೆ ತಂದಿದ್ದರು ಎಂದು ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.
ಕನ್ನಡ ಸಾಹಿತ್ಯ ಲೋಕದ ಶ್ರೇಷ್ಠ ವ್ಯಕ್ತಿಯ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕೊಡುಗೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡಲಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.