ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರವನ್ನು ಹೊತ್ತ ಅಂಬ್ಯುಲೆನ್ಸ್ ರವೀಂದ್ರ ಕಲಾಕ್ಷೇತ್ರದಿಂದ ಮೈಸೂರಿನತ್ತ ಹೊರಟಿತು.
ಬೆಂಗಳೂರು: ಸಾಹಿತಿ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರವನ್ನು ಹೊತ್ತ ಅಂಬ್ಯುಲೆನ್ಸ್ ರವೀಂದ್ರ ಕಲಾಕ್ಷೇತ್ರದಿಂದ ಮೈಸೂರಿನತ್ತ ಹೊರಟಿತು.
'ಪದ್ಮಭೂಷಣ', 'ಸರಸ್ವತಿ ಸಮ್ಮಾನ್' ಪುರಸ್ಕೃತ ಭೈರಪ್ಪ (94) ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 2.38ಕ್ಕೆ ಹೃದಯಾಘಾತದಿಂದ ನಿಧನರಾದರು.
ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಮಧ್ಯಾಹ್ನದ ವರೆಗೆ ವ್ಯವಸ್ಥೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.