ADVERTISEMENT

ಭೈರಪ್ಪ ಸ್ಮಾರಕ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 6:23 IST
Last Updated 25 ಸೆಪ್ಟೆಂಬರ್ 2025, 6:23 IST
   

ಬೆಂಗಳೂರು: ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ ಸ್ಮಾರಕ ನಿರ್ಮಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸ್ಮಾರಕ ನಿರ್ಮಾಣ ತೀರ್ಮಾನ ನನ್ನೊಬ್ಬನದಲ್ಲ. ಸರ್ಕಾರದ ಹಂತದಲ್ಲಿ ಚರ್ಚಿಸಿ ತೀರ್ಮಾನಿಸಬೇಕಾಗುತ್ತದೆ. ಕಲಾವಿದರು, ಸಾಹಿತಿಗಳ ಸ್ಮಾರಕದ ರೀತಿ ಭೈರಪ್ಪ ಅವರ ಸ್ಮಾರಕವೂ ಆಗಬೇಕು ಎಂದು ಅವರು ಹೇಳಿದರು.

ಭೈರಪ್ಪ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಾಹಿತಿ. ವಿಶ್ವದ ಹಲವು ಭಾಷೆಗಳಿಗೆ ಅವರ ಕಾದಂಬರಿ ಅನುವಾದಗೊಂಡಿವೆ. ಅವರ ಕಾದಂಬರಿಗಳು ಸಿನೆಮಾಗಳು ಕೂಡ ಆಗಿವೆ. ಸಂಸ್ಕೃತಿ ಎತ್ತಿ ಹಿಡಿದು ಸಮಾಜಕ್ಕೆ ಮಾರ್ಗದರ್ಶನ ಮಾಡಿದವರು ಭೈರಪ್ಪ ಎಂದರು.

ADVERTISEMENT

ಇದಕ್ಕೂ ಮುನ್ನ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೈರಪ್ಪ ಅವರ ಸ್ಮಾರಕ ನಿರ್ಮಿಸಬೇಕೆಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.